Now Loading

ಮರ ತೆರವಿಗೆ ಆಗ್ರಹ: ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ, ಪ್ರತಿಭಟನೆಯ ಎಚ್ಚರಿಕೆ!

ಕೂಡುಮಂಗಳೂರು ಗ್ರಾ.ಪಂ‌‌ ನ ಸುಂದರನಗರದಲ್ಲಿ ಮರವೊಂದು ಬೀಳುವ ಹಂತದಲ್ಲಿದ್ದು, ಮರ‌ ತೆರವುಗೊಳಿಸುವ ವಿಚಾರವಾಗಿ ಸಂಬಂಧಪಟ್ಟ ವಲಯ ಅರಣ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ಕಳೆದ ಮೂರು ವರ್ಷಗಳಿಂದ ಅರುಣ್ ಅವರ‌ ಮನವಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯಿಸಿದ್ದಾರೆ‌. ಕೂಡಲೇ ಬೀಳುವ ಹಂತದಲ್ಲಿರುವ ಮರವನ್ನು ತೆರವುಗೊಳಿಸಿ, ಅನಾಹುತವನ್ನು ತಪ್ಪಿಸಬೇಕಾಗಿದೆ. ಏನಾದರೂ ಅನಾಹುತ ಸಂಭವಿಸಿದರೇ, ಇದರ ಹೊಣೆಗಾರಿಕೆ ಅರಣ್ಯ ಇಲಾಖೆಯ ಅಧಿಕಾರಿಗಳು ವಹಿಸಬೇಕಾಗಿದೆ. ಮರ ತೆರವುಗೊಳಿಸಲು ಪಂಚಾಯಿತಿಯಿಂದಲೂ ಅರಣ್ಯ ಇಲಾಖೆಗೆ ಪತ್ರ ವ್ಯವಹಾರ‌ ನಡೆಸಲಾಗಿದೆ. ಆದರೂ‌ ಕೂಡಾ ದಪ್ಪ ಚರ್ಮದ ಅಧಿಕಾರಿಗಳು, ಗಮನಹರಿಸುತ್ತಿಲ್ಲ. ಈ ಬಗ್ಗೆ ಮತ್ತೇ ನಿರ್ಲಕ್ಷ್ಯ ತೋರಿದ್ದಲ್ಲಿ ಗ್ರಾಮಸ್ಥರೊಡನೆ ಅರಣ್ಯ ಇಲಾಖೆಯ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಬೀಳುವ ಹಂತದಲ್ಲಿರುವ ಮರವನ್ನು ತೆರವುಗೊಳಿಸುವಂತೆ ಆಗ್ರಹಿಸಿ, ಕಳೆದ ಮೂರು ವರ್ಷಗಳಿಂದ ಅರ್ಜಿ ನೀಡಲಾಗಿದೆ. ಆದರೆ ಈವರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿಲ್ಲ. ಮರ ಬಿದ್ದು ಮನೆಮಂದಿಗೆ ಅನಾಹುತ ಸಂಭವಿಸಿದಲ್ಲಿ ಯಾರು ಹೊಣೆ ಎಂದು ಪ್ರಶ್ನಿಸಿದ ಅವರು, ಕೂಡಲೇ ಮರವನ್ನು ತೆರವುಗೊಳಿಸಿಕೊಡುವಂತೆ ಆಗ್ರಹಿಸಿದ್ದಾರೆ ಮ ತಪ್ಪಿದ್ದಲ್ಲಿ ಅರಣ್ಯ ಇಲಾಖೆ ಮುಂಭಾಗ ಧರಣಿ ನಡೆಸುವುದಾಗಿ ಸುಂದರನಗರ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.