Now Loading

ಸುಂಟಿಕೊಪ್ಪದಲ್ಲಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕುಶಾಲನಗರ ತಾಲ್ಲೂಕಿನ ಎಮ್ಮೆಗುಂಡಿಯಲ್ಲಿ ವ್ಯಕ್ತಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಉಲುಗುಲಿಯ ನಿವಾಸಿಯಾದ ಮಧು ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ತಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿದ್ದಾನೆ. ಈತ ಸುಂಟಿಕೊಪ್ಪದಲ್ಲಿ ಮಾರ್ಕೆಟಿಂಗ್ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಘಟನೆ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.